Sunday, June 7, 2026
Homeಕರಾವಳಿಮಂಗಳೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಪಂಚಾಯತ್ ರಾಜ್ ಪ್ರತಿನಿಧಿಗಳ ಸಮಾವೇಶ

ಮಂಗಳೂರಿನಲ್ಲಿ ದ.ಕ. ಜಿಲ್ಲಾ ಮಟ್ಟದ ಪಂಚಾಯತ್ ರಾಜ್ ಪ್ರತಿನಿಧಿಗಳ ಸಮಾವೇಶ

- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪಂಚಾಯತ್ ರಾಜ್ ಪ್ರತಿನಿಧಿಗಳ ಸಮಾವೇಶ ಮಂಗಳೂರಿನಲ್ಲಿ ನಡೆಯಿತು.

ಪುರಭವನದಲ್ಲಿ ನಡೆದ ಸಮಾವೇಶವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು.

ಸಮಾವೇಶದಲ್ಲಿ ಮಾಜಿ ಸಚಿವರಾದ ಬಿ. ರಮಾನಾಥ ರೈ, ಅಭಯಚಂದ್ರ ಜೈನ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಮತ್ತು ಕೆ. ಹರೀಶ್ ಕುಮಾರ್ ಭಾಗವಹಿಸಿದ್ದರು.

ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!