Saturday, May 11, 2024
Homeಕರಾವಳಿಬೆಳ್ತಂಗಡಿ: ಮುಂಡೂರು ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿತ, ಮನೆಮಂದಿ ಪ್ರಾಣಾಪಾಯದಿಂದ ಪಾರು

ಬೆಳ್ತಂಗಡಿ: ಮುಂಡೂರು ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿತ, ಮನೆಮಂದಿ ಪ್ರಾಣಾಪಾಯದಿಂದ ಪಾರು

spot_img
- Advertisement -
- Advertisement -

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮುಂಡೂರು ಗ್ರಾಮದ ಪರಂಬುಡೆಯಲ್ಲಿ ಧಾರಕಾರವಾಗಿ ಸುರಿದ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಮನೆಯಲ್ಲಿದ್ದ ಐದು ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ.
ಕಳೆದ ಒಂದು ವಾರದಿಂದ ನಿರಂತರವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಮಳೆ ಸುರಿಯುತ್ತಿದ್ದು ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಪರಂಬುಡೆ ಅಣ್ಣಿ ಆಚಾರ್ಯ ಅವರ ಮಣ್ಣಿನ ಮನೆಯ ಹಂಚು ಸಂಪೂರ್ಣ ಕುಸಿದಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.


ಅಣ್ಣಿ ಆಚಾರ್ಯ ಅವರ ಕೈಗೆ ಸಣ್ಣ ಪ್ರಮಾಣದ ಗಾಯವಾಗಿದೆ,
ಈಗಾಗಲೇ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳು, ಪಿಡಿಓ,ಗ್ರಾಮಕರಣಿಕರು, ಊರವರು , ಎಸ್.ಕೆ. ಡಿ.ಆರ್.ಡಿ.ಪಿ ವಿಪತ್ತು ನಿರ್ವಹಣಾ ತಂಡದ ಸದಸ್ಯರು, ಜನಪ್ರತಿನಿಧಿಗಳು,ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭೇಟಿ ನೀಡಿ ಮನೆಯ ದುರಸ್ತಿ ಕಾರ್ಯದಲ್ಲಿ ತೊಡಗಿದ್ದಾರೆ.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರು ಸರಕಾರದಿಂದ ಪರಿಹಾರ ನೀಡುವ ವ್ಯವಸ್ಥೆ ಮಾಡುತ್ತೇನೆ ಎಂದು ಭರವಸೆಯನ್ನು ನೀಡಿರುತ್ತಾರೆ.

ಸದ್ಯ ಮನೆಯವರು ಸಂಬಂಧಿಕರ ಮನೆಯಲ್ಲಿದ್ದು, ನಂತರ ಗುರುವಾಯನಕೆರೆ ನಿವಾಸಿ ಪುರುಷೋತ್ತಮ ಆಚಾರ್ಯರು ಮುಂಡೂರಿನ ತನ್ನ ಮನೆಯಲ್ಲಿ ಒಂದು ವಾರಗಳ ವಾಸ್ತ್ಯಕ್ಕೆ ವ್ಯವಸ್ಥೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!