Thursday, June 4, 2026
Homeಕರಾವಳಿಪುತ್ತೂರು: ಕೋಮು ಪ್ರಚೋದನಾಕಾರಿ ಪೋಸ್ಟ್ ಹಾಕಿದ ಗೃಹರಕ್ಷಕ ದಳ ಸಿಬ್ಬಂದಿ ಸಸ್ಪೆಂಡ್

ಪುತ್ತೂರು: ಕೋಮು ಪ್ರಚೋದನಾಕಾರಿ ಪೋಸ್ಟ್ ಹಾಕಿದ ಗೃಹರಕ್ಷಕ ದಳ ಸಿಬ್ಬಂದಿ ಸಸ್ಪೆಂಡ್

- Advertisement -
- Advertisement -

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು ಮಾಡುವಂತಹ ಪೋಸ್ಟ್ ಹಾಕಿದ ಗೃಹರಕ್ಷಕ ಸಿಬ್ಬಂದಿಯನ್ನು ಅಮಾನತು ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಗೃಹರಕ್ಷಕ ದಳದ ಸಿಬ್ಬಂದಿಯಾಗಿರುವ ಪುತ್ತೂರಿನ ಸಾಲ್ಮರ ನಿವಾಸಿ ಸಲಾಮುದ್ದೀನ್ ನೌಷದ್ ಎಂಬಾತ ಕಟೀಲು ಜಾತ್ರೋತ್ಸವದ ಸಂದರ್ಭದಲ್ಲಿ ನಡೆಯುವ ತೂಟೆದಾರ(ಬೆಂಕಿ ಕಾಳಗ)ದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ ಶಾಸಕ ಸಂಜೀವ ಮಠಂದೂರು ಅವರು ಗೃಹರಕ್ಷಕ ದಳದ ಜಿಲ್ಲಾ ಕಂಮಾಂಡೆಂಟ್ ಮುರಳಿ ಮೋಹನ್ ಚೂಂತಾರು ಅವರ ಗಮನಕ್ಕೆ ತಂದಿದ್ದರು.ಈ ಬಗ್ಗೆ ತನಿಖೆ ನಡೆಸಿ ತಕ್ಷಣ ಆತನನ್ನು ಅಮಾನತು ಮಾಡಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!