Monday, June 8, 2026
HomeUncategorizedರಾಜ್ಯದ ಅಡಿಕೆ ಬೆಳೆಗಾರರಿಗೆ ಸಿಹಿಸುದ್ದಿ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

ರಾಜ್ಯದ ಅಡಿಕೆ ಬೆಳೆಗಾರರಿಗೆ ಸಿಹಿಸುದ್ದಿ ಕೊಟ್ಟ ಗೃಹ ಸಚಿವ ಆರಗ ಜ್ಞಾನೇಂದ್ರ

- Advertisement -
- Advertisement -

ಬೆಂಗಳೂರು : ರಾಜ್ಯದ ಅಡಿಕೆ ಬೆಳಗಾರರಿಗೆ ಗೃಹ ಸಚಿನ ಆರಗ ಜ್ಞಾನೇಂದ್ರ ಸಿಹಿ ಸುದ್ದಿ ನೀಡಿದ್ದಾರೆ. ಭೂತಾನ್ ದೇಶದಿಂದ ಅಡಿಕೆ ಆಮದು ಬಗ್ಗೆ ಆತಂಕ ಬೇಡ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಿಕೆ ಉತ್ಪನ್ನಗಳು, ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಿಕೆಗೆ ಮಾತ್ರ ಅನುಮತಿ ನೀಡಲಾಗಿದೆ, ಎಂದರು. ನೆರೆಯ ಭೂತಾನ್ ದೇಶವು, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂದಿದ್ದಾರೆ.

ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಿಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದು ಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕ ದಲ್ಲಿದ್ದು, ಭೂತಾನ್ ಅಡಿಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು, ಬೆಳೆಗಾರರಿಗೆ, ಯಾವುದೇ ಗೊಂದಲ ಆತಂಕ ಬೇಡ, ಎಂದು ಸಚಿವರು, ಅಭಯ ನೀಡಿದ್ದಾರೆ.ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು, ಲೋಕ ಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ಹೇಳಿದರು.

- Advertisement -

Latest News

error: Content is protected !!