Monday, June 8, 2026
Homeಕರಾವಳಿಉಡುಪಿಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ: ಆಮದು ಅಡಿಕೆಗೆ ನಿಯಂತ್ರಣ...

ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಭೇಟಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ: ಆಮದು ಅಡಿಕೆಗೆ ನಿಯಂತ್ರಣ ಹೇರುವ ಬಗ್ಗೆ ಚರ್ಚೆ

- Advertisement -
- Advertisement -

ನವದೆಹಲಿ: ಆಮದು ಅಡಿಕೆಗೆ ನಿಯಂತ್ರಣ ಹೇರುವ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಕೇಂದ್ರ ಸಚಿವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ನವದೆಹಲಿಯಲ್ಲಿ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಭೇಟಿ ಮಾಡಿದ ಆರಗ ಜ್ಞಾನೇಂದ್ರ, ಆಮದು ಅಡಿಕೆಯ ಮೇಲೆ ನಿಯಂತ್ರಣ ಹೇರುವ ಕುರಿತಾಗಿ ಮಾತುಕತೆ ನಡೆಸಿದ್ದಾರೆ.

ಕೇಂದ್ರ ಸಚಿವರ ಭೇಟಿ ವೇಳೆ ಸಾಗರ ಶಾಸಕ ಹರತಾಳು ಹಾಲಪ್ಪ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಉಪಸ್ಥಿತರಿದ್ದರು‌‌.

ಗೃಹ ಸಚಿವ ಆರಗ ಜ್ಞಾನೇಂದ್ರ ರಾಜ್ಯ ಅಡಕೆ ಕಾರ್ಯಪಡೆಯ ಅಧ್ಯಕ್ಷರೂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

- Advertisement -

Latest News

error: Content is protected !!