Saturday, June 6, 2026
Homeಕರಾವಳಿಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

- Advertisement -
- Advertisement -

ಮಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ಮಾಡಿದರು.

ಮಂಗಳೂರಿನ‌ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ಗೃಹ ಸಚಿವರು ನಳೀನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.‌

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಗೃಹ ಸಚಿವರ ಜೊತೆಗಿದ್ದರು.

ಕಳೆದ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಳೀನ್ ಕುಮಾರ್ ಕಟೀಲ್ ಕೆಲವು ದಿನಗಳ ಹಿಂದೆ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು.

ಕಳೆದ ವಾರ ಮಂಗಳೂರಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಕೂಡಾ ಆಸ್ಪತ್ರೆಗೆ ಭೇಟಿ ನೀಡಿ ನಳೀನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದ್ದರು.

- Advertisement -

Latest News

error: Content is protected !!