Thursday, June 4, 2026
Homeಕರಾವಳಿಉಡುಪಿಎರ್ನಾಕುಲಂ ಸ್ಫೋಟದ ಹಿನ್ನೆಲೆಯಲ್ಲಿ ಕರಾವಳಿ ಭಾಗ ಮತ್ತು ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ:ಉಡುಪಿಯಲ್ಲಿ ಗೃಹ ಸಚಿವ ಡಾ....

ಎರ್ನಾಕುಲಂ ಸ್ಫೋಟದ ಹಿನ್ನೆಲೆಯಲ್ಲಿ ಕರಾವಳಿ ಭಾಗ ಮತ್ತು ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ:ಉಡುಪಿಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿಕೆ

- Advertisement -
- Advertisement -

ಉಡುಪಿ: ಕೇರಳ‌ ರಾಜ್ಯದ ಎರ್ನಾಕುಲಂನಲ್ಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಕ್ಷ್ಮ ಗಮನ ಇರಿಸಿದ್ದು ಕೆಲವು ಸಂಘಟನೆಗಳು ಸಕ್ರಿಯವಾಗಬಹುದು ಅಥವಾ ಆಗದೇ ಇರಬಹುದು ಹಾಗಾಗಿ ಎಲ್ಲಾ ಎಸ್ ಪಿ ಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಗುಪ್ತಚರ ಇಲಾಖೆಗೆ ರಾಜ್ಯದಲ್ಲಿ ತೀವ್ರ ನಿಗಾ ವಹಿಸುವಂತೆ ಸೂಚಿಸಲಾಗಿದ್ದು,
ಯಾವುದೇ ವ್ಯಕ್ತಿ ಅಥವಾ ಸಂಘಟನೆಯ ಮೇಲೆ ಅನುಮಾನ ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

- Advertisement -

Latest News

error: Content is protected !!