Wednesday, June 3, 2026
Homeತಾಜಾ ಸುದ್ದಿಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿಗೆ ಯತ್ನ ಪ್ರಕರಣ: ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ: ಗೃಹ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿಗೆ ಯತ್ನ ಪ್ರಕರಣ: ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

- Advertisement -
- Advertisement -

ಬೆಂಗಳೂರು: ಮಂಗಳೂರಿನಲ್ಲಿ ನಿನ್ನೆ ರಾತ್ರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ದಾಳಿಗೆ ಯತ್ನ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಹಲ್ಲೆಗೆ ಯತ್ನ ಮಾಡಿದ್ದಾರೆ, ವಾಹನದ ರಿಜಿಸ್ಟ್ರೇಷನ್ ನಂಬರ್ ಸಿಕ್ಕಿದೆ ಎಂದು ತಿಳಿಸಿದ್ದಾರೆ.

ನಿನ್ನೆ ರಾತ್ರಿ ಮಂಗಳೂರಿನಿಂದ ಬೆಳ್ತಂಗಡಿಗೆ ಹೋಗುವ ವೇಳೆ ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಬೆದರಿಕೆ ಹಾಕಲಾಗಿದೆ ಎಂದು ಶಾಸಕ ಹರೀಶ್ ಪೂಂಜ ಅವರ ಕಾರು ಚಾಲಕ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ ಐಆರ್ ದಾಖಲಾಗಿದೆ.

- Advertisement -

Latest News

error: Content is protected !!