Saturday, June 6, 2026
Homeಕರಾವಳಿಕಡಬ; ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ನಗದು ಕಳ್ಳತನ

ಕಡಬ; ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ನಗದು ಕಳ್ಳತನ

- Advertisement -
- Advertisement -

ಕಡಬ; ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯಲ್ಲಿ ಕಳ್ಳತವಾಗಿದೆ. ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಇನ್ನೊಂದು ಮನೆಯ ಬೀಗ‌ ಮುರಿಯುವ ವೇಳೆ ಆಟೋ ರಿಕ್ಷಾ ಬರುತ್ತಿರುವುದನ್ನು ನೋಡಿದ ಕಳ್ಳರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!