Thursday, July 16, 2026
Homeಉದ್ಯಮಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ

ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ

- Advertisement -
- Advertisement -

ಕಾರವಾರ: ಪ್ರವಾಸಕ್ಕೆ ಹೋಗಿದ್ದ ವಿದ್ಯಾರ್ಥಿಗಳ ಮೇಲೆ‌ ಜೇನು ನೊಣ ದಾಳಿ ಮಾಡಿದ ಘಟನೆ ಕಾರವಾರದಲ್ಲಿ ನಡೆದಿದೆ. ಜೇನು ನೊಣಗಳ ದಾಳಿಯಿಂದ 16ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ.

ಶಿರ್ವೆ ಪ್ರವಾಸಕ್ಕೆ ಹೋಗಿದ್ದ ಬೇಳೂರು ಸ್ವಾತಿ ನಿಕೇತನ ರೆಸಿಡೆನ್ಷಿಯಲ್ ಶಾಲೆಯ ವಿದ್ಯಾರ್ಥಿಗಳ ಮೇಲೆ ಜೇನು ದಾಳಿ ನಡೆಸಿದ್ದು, 6, 7 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರವಾಸ ಆಯೋಜಿಸಲಾಗಿತ್ತು.

ಕಾರವಾರ ಕ್ರಿಮ್ಸ್ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆಸ್ಪತ್ರೆಗೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ವಿದ್ಯಾರ್ಥಿಗಳ ಆರೋಗ್ಯ ವಿಚಾರಣೆ ನಡೆಸಿದ್ದಾರೆ.

- Advertisement -

Latest News

error: Content is protected !!