Saturday, May 18, 2024
Homeಕರಾವಳಿಮಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣ; 7 ಮಂದಿ ಆರೋಪಿಗಳನ್ನು ಬಂಧಿಸಿದ...

ಮಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣ; 7 ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಇಲ್ಲಿನ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಂದೇಲ್ ಎಂಬಲ್ಲಿ ಉದ್ಯಮಿಯನ್ನು ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಸುರೇಂದ್ರ, ಮುರಳಿ ಕೃಷ್ಣ, ಕಿಶೋರ್, ಸುಶಾಂತ್, ಲಿಖಿತ್, ತರುಣ್ ಮತ್ತು ಅಕ್ಷತಾ ಬಂಧಿತರು.

ಆರೋಪಿಗಳು ಕೇರಳ ಮೂಲದ ಉದ್ಯಮಿ ಮೊಯ್ದಿನ್ ಕುಂಞಿ ಸಂಪರ್ಕ ಸಾಧಿಸಿ ಮೂಡುಬಿದಿರೆ ಮೂಲದ ಯುವತಿಯೊಂದಿಗೆ ಫೆಬ್ರವರಿ 16ರಂದು ವಾಮಂಜೂರು ಸಮೀಪದ ಮೂಡುಶೆಡ್ಡೆಯಲ್ಲಿರುವ ರೆಸಾರ್ಟ್‌ವೊಂದಕ್ಕೆ ತೆರಳಿದ್ದರು. ರಾತ್ರಿ ವೇಳೆ ಅವರು ರೆಸಾರ್ಟ್‌ನಲ್ಲಿದ್ದಾಗಲೇ ತಂಡವೊಂದು ಕೊಠಡಿಗೆ ಏಕಾಏಕಿ ಪ್ರವೇಶಿಸಿ ಅಲ್ಲಿನ ದೃಶ್ಯಗಳನ್ನು ಸೆರೆ ಹಿಡಿದು ಹಲ್ಲೆಗೈದು ಹಣಕ್ಕಾಗಿ ಪೀಡಿಸಿದ್ದಾರೆ ಎನ್ನಲಾಗಿದೆ.ಅಂದು ಮೊಯ್ದಿನ್ ಕುಂಞ ತನ್ನಲ್ಲಿದ್ದ ಹಣ ನೀಡಿ ಅಲ್ಲಿಂದ ಪಾರಾಗಿ ಬಂದಿದ್ದರೂ ಕೂಡ ಕರೆ ಮಾಡಿ ಮತ್ತೆ ಹಣಕ್ಕಾಗಿ ಪೀಡಿಸಿದ್ದಾರೆ. ಕಳೆದ ತಿಂಗಳಲ್ಲಿ ಹತ್ತು ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡ ಮೊಯ್ದಿನ್ ಕುಂಞಿ ಹನಿಟ್ರ್ಯಾಪ್ ತಂಡದ ಒತ್ತಡ ತಾಳಲಾರದೆ ಕಾವೂರು ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಮತ್ತು ಕಾವೂರು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳ ಪೈಕಿ ಸುರೇಂದ್ರ ಅಲಿಯಾಸ್ ಪ್ರೀತಂ(ಪ್ರೀತು)ಎಂಬಾತನ ವಿರುದ್ಧ ಈ ಹಿಂದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಇನ್ನೋರ್ವ ಆರೋಪಿ ಕಿಶೋರ್ ಎಂಬಾತನ ವಿರುದ್ಧ ಈ ಹಿಂದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸುಶಾಂತ್ ಎಂಬಾತನ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!