Thursday, June 4, 2026
Homeತಾಜಾ ಸುದ್ದಿಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಪುನೀತ್ ರಾಜ್ ಕುಮಾರ್ ಗೆ ಮೈಸೂರು ವಿವಿ ಮರಣೋತ್ತರ ಗೌರವ ಡಾಕ್ಟರೇಟ್ ಪದವಿ ಪ್ರದಾನ

- Advertisement -
- Advertisement -

ಮೈಸೂರು: ದಿ.‌ ಚಲನಚಿತ್ರ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮೈಸೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.‌ ಮೈಸೂರು ವಿವಿಯ ಕ್ರಾಫರ್ಡ್ ಹಾಲ್‌ನಲ್ಲಿ ನಡೆದ 102ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪದವಿ ಪ್ರದಾನ ಮಾಡಲಾಗಿದೆ.

ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ವೇಳೆ ರಾಘವೇಂದ್ರ ರಾಜಕುಮಾರ್, ವಿನಯ್ ರಾಜಕುಮಾರ್, ಹಾಗೂ ಪುನೀತ್ ಸಹೋದರಿ ಲಕ್ಷ್ಮೀ ಹಾಜರಿದ್ದರು.

1976 ರಲ್ಲಿ ಮೈಸೂರು ವಿವಿಯಿಂದ ಡಾ. ರಾಜ್ ಕುಮಾರ್ ಅವರಿಗೆ ಕೂಡಾ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿತ್ತು. ಇಂದು
ಪುನೀತ್ ರಾಜಕುಮಾರ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.

- Advertisement -

Latest News

error: Content is protected !!