Sunday, May 19, 2024
Homeಕರಾವಳಿಸೆಪ್ಟೆಂಬರ್ 5 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸಕ್ಕಿ ಊಟ

ಸೆಪ್ಟೆಂಬರ್ 5 ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹೊಸಕ್ಕಿ ಊಟ

spot_img
- Advertisement -
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯದಂತೆ ನಡೆಯುವ ಹೋಸ್ತರೋಗಣೆ ಅಥವಾ ಹೊಸಕ್ಕಿ ಊಟ ಸೆಪ್ಟೆಂಬರ್ 5 ರಂದು ನಡೆಯಲಿದೆ.

ಕಾರ್ಯಕ್ರಮ ಸಂಬಂಧ ಸೋಮವಾರ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಹಾಗೂ ಕದಿರು ಪೂಜೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

ಪ್ರಾತಃಕಾಲ 5.15 ಗಂಟೆಗೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಮಹಾಭಿಷೇಕ, ಪೂರ್ವಾಹ್ನ 7 ಗಂಟೆಗೆ ತೆನೆ ತರುವುದು ಮತ್ತು ಕದಿರು ಪೂಜೆ ನಡೆಯಲಿದೆ.

ಬೆಳಗ್ಗೆ 8 ರಿಂದ 9 ರವರೆಗೆ ದೇವಳದ ನೌಕರರಿಗೆ ಮತ್ತು ಸ್ಥಳೀಯ ಭಕ್ತಾದಿಗಳಿಗೆ ಕದಿರು ವಿತರಣೆ ನಡೆಯಲಿದೆ.

ಅಂದು ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಪೂರ್ವಾಹ್ನ 9.30ರ ನಂತರ‌ ದೇವರ ದರ್ಶನಕ್ಕೆ ಅವಕಾಶ ದೊರೆಯಲಿದೆ.

- Advertisement -
spot_img

Latest News

error: Content is protected !!