Thursday, June 4, 2026
Homeಕರಾವಳಿಉಡುಪಿಉಡುಪಿ:ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆ

ಉಡುಪಿ:ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆ

- Advertisement -
- Advertisement -

ಉಡುಪಿ:ಕುಂದಾಪುರದ ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಭೋಜಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಟ್ಟೆ ಭೋಜಣ್ಣ (80) ಅವರು ರಿವಾಲ್ವರ್ ನಿಂದ ಶೂಟ್ ಮಾಡಿಕೊಂಡು ಸಾವಿಗೆ ಶರಣಾಗಿದ್ದಾರೆ.

ಕುಂದಾಪುರ ತಾಲೂಕಿನಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯಲ್ಲಿ ಸಿಟೌಟ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕುಂದಾಪುರದ ಚಿನ್ಮಯಿ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿವಾಗಿದೆ. ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಭೋಜಣ್ಣ ಅವರ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ  ಕುಂದಾಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!