- Advertisement -
![]()
- Advertisement -
ಕಾರ್ಕಳ : ಮುಂಬೈನಲ್ಲಿ ಹೋಟೆಲ್ ನಡೆಸುತ್ತಿದ್ದ ಕಾರ್ಕಳ ಮೂಲದ ಉದ್ಯಮಿ ಸುನೀಲ್ ಶೆಟ್ಟಿ(45) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಹಿರ್ಗಾನ ಕೃಷ್ಣಬೆಟ್ಟು ನಿವಾಸಿಯಾಗಿರುವ ಸುನೀಲ್ ಶೆಟ್ಟಿ ಮನೆಯಲ್ಲಿಯೇ ನಾಡಕೋವಿಯಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ.
ಸುನೀಲ್ ಶೆಟ್ಟಿ ಪುಣೆಯಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದರು. ಇತ್ತೀಚೆಗೆ ತೀವ್ರ ನಷ್ಟವುಂಟಾಗಿ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದ್ದರು. ಇದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸುನೀಲ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -


