Thursday, June 4, 2026
Homeಕರಾವಳಿಉಡುಪಿಉಡುಪಿ: ಕುಡಿದ ಮತ್ತಿನಲ್ಲಿ ಮನೆಗೆ ಬೆಂಕಿ ಹಚ್ಚಿದ ಪಾಪಿ; ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು...

ಉಡುಪಿ: ಕುಡಿದ ಮತ್ತಿನಲ್ಲಿ ಮನೆಗೆ ಬೆಂಕಿ ಹಚ್ಚಿದ ಪಾಪಿ; ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಕರಕಲು

- Advertisement -
- Advertisement -

ಉಡುಪಿ: ಕುಡಿದ ಮತ್ತಿನಲ್ಲೊಬ್ಬ ಕುಡುಕ  ಪತ್ನಿಗೆ ಹೊಡೆದಿದ್ದಲ್ಲದೇ ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಸುಟ್ಟು ಕರಕಲಾಗಿರುವ ಘಟನೆ  ಯಡಾಡಿ ಮತ್ಯಾಡಿ ಗ್ರಾಮದ ಕ್ಯಾಸನಮಕ್ಕಿಯಲ್ಲಿ ನಡೆದಿದೆ.

ಇಲ್ಲಿನ ಶುಭಲತಾ ಎಂಬವರ ಪತಿ ದಿನೇಶ ಎಂಬಾತ ಮೇ 8ರಂದು ರಾತ್ರಿ ವಿಪರೀತ ಕುಡಿದು ಮನೆಗೆ ಬಂದು ವಿನಾಃಕಾರಣ ಅವಾಚ್ಯ ಶಬ್ದದಿಂದ ಬೈದು ಶುಭಲತಾ ಅವರಿಗೆ ಹೊಡೆದಿದ್ದನು.ಅದಕ್ಕಾಗಿ ಶುಭಲತಾ ತನ್ನ ಮನೆ ಅಂಪಾರಿಗೆ ಹೋಗಿದ್ದರು. ಮರುದಿನ ಬೆಳಗ್ಗೆ ವಾಪಾಸ್ಸು ಮನೆಗೆ ಬಂದು ನೋಡುವಾಗ ದಿನೇಶ್ ಮನೆಗೆ ಬೆಂಕಿ ಹಚ್ಚಿರುವುದು ಗೊತ್ತಾಗಿದೆ.

ಇದರಿಂದ ಮನೆಯ ಹಿಂದಿನ ಭಾಗ ಬೆಂಕಿ ತಗುಲಿ ಮರದ ಉಪಕರಣ ಹಾಗೂ ಅಡುಗೆ ಮಾಡುವ ಸಾಮಗ್ರಿಗಳು ಮತ್ತು ಬಟ್ಟೆಗಳು, ಅಡುಗೆ ಆಹಾರ ಪದಾರ್ಥಗಳು ಬೆಂಕಿಯಲ್ಲಿ ಸುಟ್ಟು ಹೋಗಿದೆ. ಇದರಿಂದ ಒಟ್ಟು 3 ಲಕ್ಷ ರೂ. ಮೌಲ್ಯದ ಸೊತ್ತುಗಳು ನಷ್ಟವಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!