Saturday, June 6, 2026
Homeಕರಾವಳಿಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವು

ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವು

- Advertisement -
- Advertisement -

ಬಂಟ್ವಾಳ: ಮನೆ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕು ಸಜೀಪ ಮುನ್ನೂರು ಗ್ರಾಮದ ನಂದಾವರ ಗುಂಪು ಮನೆ ಎಂಬಲ್ಲಿ ಇಂದು ಬೆಳಗ್ಗಿನ ಜಾವ ನಡೆದಿದೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದೆ.

ಮಹಮ್ಮದ್ ಎಂಬವರ ಪತ್ನಿ ಝರೀನಾ(47) ಮೃತ ದುರ್ದೈವಿ. ಮಹಮ್ಮದ್ ಹಾಗೂ ಅವರ ಪುತ್ರಿ ಸಫಾ(20) ಅವರನ್ನು ರಕ್ಷಿಸಲಾಗಿದೆ.

ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಮಹಮ್ಮದ್ ಅವರ ಮನೆಗೆ ಗುಡ್ಡ ಕುಸಿದು ಬಿದ್ದಿದೆ. ಈ ವೇಳೆ ಮಹಮ್ಮದ್ ರನ್ನು ರಕ್ಷಿಸಲಾಗಿದ್ದರೂ, ಝರೀನಾ ಮತ್ತು ಸಫಾ ಕುಸಿದ ಮಣ್ಣಿನೊಳಗೆ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಅವರನ್ನು ರಕ್ಷಣಾ ಕಾರ್ಯ ಕೈಗೊಂಡರೂ ಅಷ್ಟರಲ್ಲಿ ಝರೀನಾ ಕೊನೆಯುಸಿರೆಳೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಸಫಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ ಸ್ಥಳದಲ್ಲಿ ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳದಲ್ಲಿದ್ದಾರೆ.

- Advertisement -

Latest News

error: Content is protected !!