Wednesday, June 3, 2026
Homeಕರಾವಳಿಉಪ್ಪಿನಂಗಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ಕಳವು

ಉಪ್ಪಿನಂಗಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಭರಣ ಕಳವು

- Advertisement -
- Advertisement -

ಉಪ್ಪಿನಂಗಡಿ: ಇಲ್ಲಿನ ಮನೆಯೊಂದರ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಕದ್ದೊಯ್ದ ಘಟನೆ ನಡೆದಿದೆ.

ಕಲ್ಲೇರಿ ಎಂಬಲ್ಲಿ ಅಯ್ಯಂಗಾರ್ ಬೇಕರಿ ನಡೆಸುತ್ತಿದ್ದ ಶರತ್ ಎಂಬವರ ಮನೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು 180 ಗ್ರಾಂ. ತೂಕದ ಚಿನ್ನಾಭರಣ, ಹತ್ತು ಸಾವಿರಕ್ಕೂ ಹೆಚ್ಚು ನಗದು ಹಾಗೂ ದೇವರ ಕೋಣೆಯಲ್ಲಿದ್ದ ಬೆಳ್ಳಿ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ.

ರಾತ್ರಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!