Friday, June 5, 2026
Homeಕರಾವಳಿಕಡಬದಲ್ಲಿ ರಾತ್ರೋರಾತ್ರಿ ಮನೆಗೆ ನುಗಿದ್ದ ಕಳ್ಳರು: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಕಡಬದಲ್ಲಿ ರಾತ್ರೋರಾತ್ರಿ ಮನೆಗೆ ನುಗಿದ್ದ ಕಳ್ಳರು: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

- Advertisement -
- Advertisement -

ಕಡಬ: ರಾತ್ರಿ ಮನೆಯವರು ಮಲಗಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಕಡಬದ  ಕುಂತೂರು ಗ್ರಾಮದ ನೂಚಿಲ ಎಂಬಲ್ಲಿ ನಡೆದಿದೆ.

ಇಲ್ಲಿನ  ನಿವಾಸಿ ಅನಿಸ್ ಎಂಬವರ ಮನೆಯ ಹಿಂದಿನ ಬಾಗಿಲಿನಿಂದ ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಕಪಾಟನ್ನು ಜಾಲಾಡಿದ್ದಾರೆ.ಬಳಿಕ ಮನೆಯಲ್ಲಿ ಮಲಗಿದ್ದ ಅನಿಸ್ ಅವರ ಪತ್ನಿ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರ, ಅವರ ತಾಯಿಯ ಸರ ತೆಗೆದಿದ್ದಾರೆ. ಇನ್ನು ಕಾಲಲ್ಲಿದ್ದ ಚಿನ್ನವನ್ನು ತೆಗೆಯುವ ಸಂದರ್ಭ ಎಚ್ಚರಗೊಂಡಾಗ ಕಳ್ಳರು ಪರಾರಿಯಾಗಿದ್ದಾರೆ.

ಸುಮಾರು 12 ಪವನ್ ಚಿನ್ನ ಕಳ್ಳತನವಾಗಿದೆ ಅಂತಾ ಹೇಳಲಾಗಿದೆ. ಇನ್ನು ಇವರ ಮನೆಯ ಪಕ್ಕದ ಸೈಮನ್ ಎಂಬವರ ಮನೆಯ ಬಾಗಿಲು ಒಡೆದು ಒಳ ನುಗ್ಗಿ ಮನೆಯಲ್ಲಿದ್ದ ಸುಮಾರು 5000 ರೂ ಕಳ್ಳತನಗೈದಿದ್ದಾರೆ. ಸ್ಥಳಕ್ಕೆ ಶ್ವಾನ ದಳ ಅಗಮಿಸಿ ಪರಿಶೀಲನೆ ನಡೆಸಲಾಗಿದೆ. ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಕಡಬ ಠಾಣಾಧಿಕಾರಿ ರುಕ್ಮ ನಾಯ್ಕ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

- Advertisement -

Latest News

error: Content is protected !!