Thursday, June 4, 2026
Homeಕರಾವಳಿಉಡುಪಿಕಾರ್ಕಳ, ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಕಳವು

ಕಾರ್ಕಳ, ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಕಳವು

- Advertisement -
- Advertisement -

ಕಾರ್ಕಳ: ವ್ಯಾಪಾರಿಯೊಬ್ಬರ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೌಡೂರು ಗ್ರಾಮದ ಕಂಡಲ್ಕೆ ಎಂಬಲ್ಲಿ ನಡೆದಿದೆ.

ಇಲ್ಲಿನ ಮಹಮ್ಮದ್ ಇರ್ಫಾನ್ ಎಂಬವರು ಫೆ.3ರಂದು ಕಡ್ತಲ ಜಾತ್ರೆಯಲ್ಲಿ ವ್ಯಾಪಾರ ಮಾಡಲು ಹೋಗಿದ್ದು, ಅವರ ಹೆಂಡತಿ ಫೆ.4ರಂದು ಬೈಲೂರು ಎಂಬಲ್ಲಿರುವ ಅವರ ತಾಯಿ ಮನೆಗೆ ಹೋಗಿದ್ದರು. ಇದೇ ಸಮಯದಲ್ಲಿ ಮನೆಯ ಮುಂದಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಬೆಡ್‌ ರೂಮಿನಲ್ಲಿದ್ದ 4,000 ರೂ. ನಗದು ಸೇರಿದಂತೆ ಸುಮಾರು 6 ಲಕ್ಷದ 28 ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!