Friday, June 5, 2026
Homeಕರಾವಳಿಸುಳ್ಯ; ಕನಕಮಜಲಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

ಸುಳ್ಯ; ಕನಕಮಜಲಿನಲ್ಲಿ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ

- Advertisement -
- Advertisement -

ಸುಳ್ಯ; ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕನಕಮಜಲಿನಲ್ಲಿ ನಡೆದಿದೆ. ಇಲ್ಲಿನ ಸುಣ್ಣಮೂಲೆಯ ಯುರೇಶ್ ಬುಡ್ಲೆಗುತ್ತು ಎಂಬವರ ಮನೆಗೆ ಭಾನುವಾರ ತಡರಾತ್ರಿ ಹಿಂಬದಿಯ ಬಾಗಿಲು ಮುರಿದು ನುಗ್ಗಿದ ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ.

ಸಂಬಂಧಿಯೊಬ್ಬರು ನಿಧನರಾದ ಹಿನ್ನೆಲೆಯಲ್ಲಿ ಯುರೇಶ್ ಬುಡ್ಲೆಗುತ್ತು ಮತ್ತು ಕುಟುಂಬದವರು ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು. ಇದೇ ವೇಳೆ ಮನೆಯ ಹಿಂಬದಿಯ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ. ಸುಳ್ಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!