- Advertisement -
- Advertisement -
ವಿಟ್ಲ: ಹಾಡಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಕೊಳ್ನಾಡು ಗ್ರಾಮದ ಮಂಕುಡೆ ಕಲ್ಕಾಜೆ ಗಣೇಶ್ ಶೆಟ್ಟಿ ಎಂಬವರ ಮನೆಯಲ್ಲಿ ನಡೆದಿದೆ.
ಗಣೇಶ್ ಶೆಟ್ಟಿ ಅವರ ಪತ್ನಿ ಪೇಟೆಗೆ ಹೋಗೋದನ್ನೇ ಕಾದು ಕೂತಿದ್ದ ಮನೆಗೆ ನುಗ್ಗಿ ಕೈಚಳಕ ತೋರಿಸಿದ್ದಾರೆ.ಹಿಂಬದಿ ಬಾಗಿಲನ್ನು ಮುರಿದು ಮನೆಯ ಕಪಾಟಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.
- Advertisement -