Friday, June 5, 2026
Homeಕರಾವಳಿಪುತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ

ಪುತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ

- Advertisement -
- Advertisement -

ಪುತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಕಾಡಬಾಗಿಲು ಎಂಬಲ್ಲಿ ನಡೆದಿದೆ.

ಕಾಡಬಾಗಿಲು ನಿವಾಸಿ ಸಾರಮ್ಮ ಅವರು ತನ್ನ ಸೊಸೆ ಜೊತೆ ಮೊಮ್ಮಗನನ್ನು ಔಷಧಿಗೆಂದು ಮನೆಗೆ ಬೀಗ ಹಾಕಿ ಶುಕ್ರವಾರ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು.ಬಳಿಕ ರಾತ್ರಿ ತನ್ನ ಸಂಬಂಧಿಕರ ಮನೆಯಲ್ಲಿ ಉಳಿದುಕೊಂಡಿದ್ದರು. ಶನಿವಾರ ಮನೆಗೆ ಮರಳಿ ಬಂದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿತ್ತು. ಮನೆಯ ಬಾಗಿಲನ್ನು ಮುರಿಯಲೆತ್ನಿಸಿದ ಕಳ್ಳರು ಅದು ಸಾಧ್ಯವಾಗದ ಹಿನ್ನಲೆಯಲ್ಲಿ ಮನೆಯ ಕಿಟಕಿಯ ಸರಳನ್ನು ಮುರಿದು ಒಳಕ್ಕೆ ನುಗ್ಗಿ ಮನೆಯ ಕೋಣೆಯಲ್ಲಿನ ಕಪಾಟಿನಿಂದ 3 ಪವನ್ ಚಿನ್ನಾಭರಣ ಮತ್ತು 35 ಸಾವಿರ ರೂಪಾಯಿ ನಗದು ಹಾಗೂ ಇನ್ನಿತರ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ.

ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!