Tuesday, June 6, 2023
Homeಕರಾವಳಿಬಂಟ್ವಾಳ: ಮಗಳನ್ನು ಏರ್ ಪೋರ್ಟ್ ಗೆ ಬಿಡಲು ತೆರಳಿದ್ದಾಗ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂಪಾಯಿ...

ಬಂಟ್ವಾಳ: ಮಗಳನ್ನು ಏರ್ ಪೋರ್ಟ್ ಗೆ ಬಿಡಲು ತೆರಳಿದ್ದಾಗ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು

- Advertisement -
- Advertisement -

ಬಂಟ್ವಾಳ:  ಮಗಳನ್ನು  ಏರ್‌ಪೋರ್ಟ್‌ಗೆ ಬಿಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ವೀರಕಂಬದಲ್ಲಿ ನಡೆದಿದೆ.

ವೀರಕಂಬ ಬೊಣ್ಯಕುಕ್ಕು ಜನತಾ ಕಾಲೋನಿ ನಿವಾಸಿ ಮಹಮ್ಮದ್ ಮುಸ್ಲಿಯಾರ್ ರವರು ಕುಟುಂಬ ಸಮೇತರಾಗಿ ಮ.27ರಂದು ರಾತ್ರಿ ವಿದೇಶಕ್ಕೆ ತೆರಳಲಿದ್ದ ಮಗಳನ್ನು ಮಂಗಳೂರು ಏರ್‌ಪೋರ್ಟ್‌ಗೆ ಬಿಟ್ಟು ಬರಲು ಹೋಗಿದ್ದರು. ಅವರು ಮರಳಿ ಬಂದು ನೋಡಿದಾಗ ಮನೆಯ ಬಾಗಿಲು ತೆರೆದಿತ್ತಲ್ಲದೇ ಮನೆಯ ಛಾವಣಿಗೆ ಏಣಿ ಇಟ್ಟು ಮನೆಯೊಳಗೆ ನುಗ್ಗಿ ಕಪಾಟಿನ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!