Thursday, June 4, 2026
Homeತಾಜಾ ಸುದ್ದಿರಾಮನಗರ: ದೇವರ ಪ್ರಸಾದ ತರಲಿಲ್ಲ ಎಂಬ ಕಾರಣಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

ರಾಮನಗರ: ದೇವರ ಪ್ರಸಾದ ತರಲಿಲ್ಲ ಎಂಬ ಕಾರಣಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

- Advertisement -
- Advertisement -

ರಾಮನಗರ: ದೇವರ ಪ್ರಸಾದ ಪತಿ ತರಲಿಲ್ಲ ಎಂಬ ಕಾರಣಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿವೇಕಾನಂದನಗರ ಬಡಾವಣೆಯಲ್ಲಿ ನಡೆದಿದೆ. ಮೃತರನ್ನು ಶಿವನಂಜು ಅವರ ಪತ್ನಿ ಶ್ವೇತಾ (27) ಎಂದು ಗುರುತಿಸಲಾಗಿದೆ.

ವಿವೇಕಾನಂದ ನಗರ ಬಡಾವಣೆಯ ಬಾಡಿಗೆ ಮನೆಯಲ್ಲಿ ದಂಪತಿಗಳು ವಾಸವಾಗಿದ್ದು, ಗಂಡ ಶಿವನಂಜು ಪುತ್ರನೊಂದಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಕೆ ತೀರಿಸಲು ಹೋಗಿದ್ದು, ಪತಿ ಪ್ರಸಾದ ತರಲಿಲ್ಲ ಎಂಬ ಕಾರಣಕ್ಕೆ ಶ್ವೇತಾ ಜಗಳವಾಡಿ, ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಈ ಕುರಿತು ಐಜೂರು ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!