ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಲೇಜುಗಳು ಪುನರಾರಂಭಗೊಂಡ ನಂತರ ಸುಮಾರು 600 ವಿದ್ಯಾರ್ಥಿಗಳು ಕೊರೋನಾ ವೈರಸ್ ಸೋಂಕು ಪರೀಕ್ಷೆಯಲ್ಲಿ ಪಾಸಿಟಿವ್ ಕಂಡು ಬಂದಿದ್ದು, ಈ ರೋಗಕ್ಕೆ ತುತ್ತಾದ ಬಹುತೇಕ ವಿದ್ಯಾರ್ಥಿಗಳು ಕೇರಳ ಮೂಲದವರು ಎಂದು ಹೇಳಲಾಗಿದೆ.
ಕೆಲ ವಾರಗಳ ಹಿಂದೆ ಕಾಲೇಜು ವಿದ್ಯಾರ್ಥಿಗಳ ಸೋಂಕು ಪರೀಕ್ಷೆ ಮಾಡಿದ್ದು. ಅದರ ನಂತರ, ತರಗತಿಗಳು ಪ್ರಾರಂಭವಾಗಿವೆ. ಸೋಂಕುಗಳು ಹೆಚ್ಚಾದಂತೆ, ಜಿಲ್ಲೆಯ 29 ಸಂಸ್ಥೆಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.

ಕೋವಿಡ್- 19 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ ನೋಡಲ್ ಅಧಿಕಾರಿ ಡಾ ಅಶೋಕ್ ಅವರು, ಪರೀಕ್ಷೆಗಳು ಮತ್ತು ತರಗತಿಗಳ ಸಮಯದಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದ ಬಹುತೇಕ ಕಾಲೇಜುಗಳಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದು, ಕೆಲವು ಸಂಸ್ಥೆಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲು ವಿಫಲವಾದ ಕಾರಣ ಕಳೆದ ಕೆಲವು ವಾರಗಳಲ್ಲಿ ಪರೀಕ್ಷೆಗೆ ಹಾಜರಾದ ಹೆಚ್ಚಿನ ವಿದ್ಯಾರ್ಥಿಗಳು ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
ಸೋಂಕಿತ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌ಗಳು, ಫ್ಲಾಟ್‌ಗಳು ಮತ್ತು ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. 620 ವಿದ್ಯಾರ್ಥಿಗಳು ಪಾಸಿಟಿವ್ ಕಂಡು ಬಂದಿದ್ದು ಕೆಲವು ಕಾಲೇಜುಗಳಿಗೆ ತರಗತಿ ನಡೆಸುವುದನ್ನು ನಿಲ್ಲಿಸುವಂತೆ ಸೂಚಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ.