- Advertisement -
![]()
- Advertisement -
ಬೆಂಗಳೂರು: ನಾಳೆ ಕರೆ ನೀಡಲಾಗಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ. ಸಾರಿಗೆ ಸಂಘಟನೆಗಳ ಜೊತೆ ಮಾತುಕತೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್ ಸೂಚಿಸಿದೆ.
ಮುಷ್ಕರಕ್ಕೆ ತಡೆ ನೀಡುವಂತೆ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿ ಮುಷ್ಕರ ನಡೆಸದಂತೆ ಸಾರಿಗೆ ಸಂಘಟನೆಗಳಿಗೆ ಸೂಚಿಸಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ. ಶೇಕಡಾ 25 ರಷ್ಟು ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ನಾಳೆ ರಾಜ್ಯವ್ಯಾಪಿ ಮುಷ್ಕರಕ್ಕೆ ಕರೆ ಕೊಟ್ಟಿದ್ದವು. ಇದರಿಂದಾಗಿ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಆತಂಕ ಉಂಟಾಗಿತ್ತು.
- Advertisement -


