Thursday, June 4, 2026
Homeಕರಾವಳಿಮಂಗಳೂರುಮೂಡಬಿದರೆ: ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಬೃಹತ್ ಗಾತ್ರದ ಕ್ರೇನ್

ಮೂಡಬಿದರೆ: ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಬೃಹತ್ ಗಾತ್ರದ ಕ್ರೇನ್

- Advertisement -
- Advertisement -

ಮೂಡಬಿದರೆ: ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಗಾತ್ರದ ಕ್ರೇನ್ ಮನೆ ಮೇಲೆ ಬಿದ್ದ ಘಟನೆ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ನಡೆದಿದೆ.

ಮುಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಅತೀ ವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಫೆಲಿಕ್ಸ್ ರೊಡ್ರಿಗಸ್ ಎಂಬವರ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ. ಘಟನೆ ವೇಳೆ ಮನೆಮಂದಿ ಮನೆಯ ಇನ್ನೊಂದು ಬದಿಯಲ್ಲಿ ಇದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ಸಂದರ್ಭ ಕ್ರೇನ್ ನ ತುಂಡೊಂದು ಅದೇವೇಳೆ ಆ ರಸ್ತೆಯಾಗಿ ಸಂಚರಿಸುತ್ತಿದ್ದ ಕಾರೊಂದು ಮೇಲೆ ಬೀಳುವುದರಿಂದ ಕೂದಲೆಳೆ ಅಂತರದಲ್ಲಿ ತಪ್ಪಿದೆ. ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!