Monday, June 29, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕಕ್ಕಿಂಜೆ ಸ.ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ  ಹೆಜ್ಜೇನು ದಾಳಿ

ಬೆಳ್ತಂಗಡಿ : ಕಕ್ಕಿಂಜೆ ಸ.ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ  ಹೆಜ್ಜೇನು ದಾಳಿ

- Advertisement -
- Advertisement -

ಬೆಳ್ತಂಗಡಿ : ಕಕ್ಕಿಂಜೆ ಸ.ಹಿ.ಪ್ರಾ ಶಾಲೆಯಲ್ಲಿ ಮಕ್ಕಳ ಮೇಲೆ  ಹೆಜ್ಜೇನು ದಾಳಿ ನಡೆಸಿದ ಘಟನೆ ಫೆ.18  ಬೆಳಗ್ಗೆ ಸಂಭವಿಸಿದ್ದು  ಸುಮಾರು 15 ಮಕ್ಕಳು  ಹೆಜ್ಜೇನು ದಾಳಿಯಿಂದ  ಅಸ್ವಸ್ಥರಾಗಿದ್ದು ,ಸ್ಥಳೀಯ ಕ್ಕಕ್ಕಿಂಜೆ ಕೃಷ್ಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಕ್ಕಿಂಜೆ ಮಕ್ಕಳು ಶಾಲೆಯಲ್ಲಿ ಪ್ರೆಯರ್ ಮಾಡಿದ ಬಳಿಕ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಮಕ್ಕಳು ಚಲ್ಲಾಪಿಲ್ಲಿಯಾಗಿ ಓಡಿದ್ದು ಹಲವರಿಗೆ ಹೆಜ್ಜೇನು ಕಚ್ಚಿದೆ. ಮಕ್ಕಳ ಅಳು ಕೇಳಿ ಸ್ಥಳೀಯರು ಶಾಲೆಗೆ ಧಾವಿಸಿದ್ದು ಮಕ್ಕಳನ್ನು ರಕ್ಷಿಸುವ ಪ್ರಯತ್ನ ನಡೆಸಿದ್ದಾರೆ. ಹಲವು ಮಕ್ಕಳಿಗೆ ಈ ವೇಳೆ ಹೆಜ್ಜೇನು ಕಚ್ಚಿದ್ದು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಮಕ್ಕಳು ಅಸ್ವಸ್ಥರಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಶಾಲೆಯ ಸುತ್ತ ಹೆಜ್ಜೇನುಗಳು ಸುತ್ತಾಡುತ್ತಿದ್ದು ಸ್ಥಳೀಯರು ಬೆಂಕಿ ಹೊಗೆ ಹಾಕಿ ಹೆಜ್ಜೇನುಗಳನ್ನು ಓಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

- Advertisement -

Latest News

error: Content is protected !!