Monday, June 8, 2026
Homeಕರಾವಳಿಉಡುಪಿಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ ನೂರಾರು ಕೋಟಿ ವಂಚನೆ: ಸೊಸೈಟಿಗೆ ಮುತ್ತಿಗೆ ಹಾಕಿ ಆಕ್ರೋಶ...

ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ ನೂರಾರು ಕೋಟಿ ವಂಚನೆ: ಸೊಸೈಟಿಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ ಗ್ರಾಹಕರು

- Advertisement -
- Advertisement -

ಉಡುಪಿ: ನಗರದ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸೊಸೈಟಿಯಿಂದ 150 ಕೋಟಿ ವಂಚನೆ ನಡೆದಿದ್ದು, ಇದೀಗ ಠೇವಣಿದಾರರು ಸೊಸೈಟಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ.

ಸೊಸೈಟಿ ಎಂಡಿ ಪರಾರಿಯಾಗಿದ್ದು ಹಣ ಕಳೆದುಕೊಂಡ ಠೇವಣಿದಾರರು ತಮ್ಮ ಹಣ ವಾಪಾಸ್ಸು ಕೊಡುವಂತೆ ಪಟ್ಟು ಹಿಡಿದಿದ್ದಾರೆ. ಸೊಸೈಟಿಗೆ ಭೇಟಿ ನೀಡಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗ್ರಾಹಕರು ಸೊಸೈಟಿಗೆ ನುಗ್ಗಿ ನ್ಯಾಯಕ್ಕೆ ಆಗ್ರಹಿಸುತ್ತಿದ್ದಂತೆ ಕಚೇರಿಯ ಸಿಬ್ಬಂದಿಯೊಬ್ಬರು ಗ್ರಾಹಕರೆದುರೇ ಮಾತ್ರೆಗಳನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇನ್ನು ಉಡುಪಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!