Saturday, May 18, 2024
Homeಕರಾವಳಿಕಡಬ: ಮಧ್ಯರಾತ್ರಿ ಅರಣ್ಯಾಧಿಕಾರಿಗಳಿಂದ ಮನೆಗೆ ನುಗ್ಗಿ ದೌರ್ಜನ್ಯ ಪ್ರಕರಣ– ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ನ್ಯಾಯಾಲಯದ...

ಕಡಬ: ಮಧ್ಯರಾತ್ರಿ ಅರಣ್ಯಾಧಿಕಾರಿಗಳಿಂದ ಮನೆಗೆ ನುಗ್ಗಿ ದೌರ್ಜನ್ಯ ಪ್ರಕರಣ– ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸಲು ನ್ಯಾಯಾಲಯದ ಆದೇಶ

spot_img
- Advertisement -
- Advertisement -

ಪುತ್ತೂರು: ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಕಡಬದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ತಾರ್ಕಿಕ ಅಂತ್ಯ ಕಂಡಿದ್ದು, ದೌರ್ಜನ್ಯ ಎಸಗಿದ ಅರಣ್ಯ ಅಧಿಕಾರಿಗಳ ಮತ್ತು ಪೋಲೀಸರ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಸುಬ್ರಹ್ಮಣ್ಯ ವಲಯದ ಐತ್ತೂರು ರಕ್ಷಿತಾರಣ್ಯದಿಂದ ಬೆಳೆ ಬಾಳುವ ಮರಗಳು ಲೂಟಿಯಾಗುತ್ತಿದೆ ಎಂದು ದೂರು ನೀಡಿದ ಐತ್ತೂರು ಗ್ರಾಮದ ಮೂಜೂರು ನಿವಾಸಿ ಪ್ರಸಾದ್ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ನಡುರಾತ್ರಿ ದಾಳಿ ನೆಪದಲ್ಲಿ ದಾಂಧಲೆ ನಡೆಸಿ ದ್ವೇಷ ಸಾಧನೆ ಮಾಡಿದ್ದಾರೆ ಎಂದು ಹೇಳಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯಾಧಿಕಾರಿಗಳು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಅಗ್ರಹಿಸಿ ದೂರುದಾರ ಮನೆಯವರು ಹಾಗೂ ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ರ ತಂಡ ನಡೆಸುತ್ತಿರುವ ಅಮರಣಾಂತ ಉಪವಾಸ ಸತ್ಯಾಗ್ರಹಕ್ಕೆ ಈ ಮೂಲಕ ಉತ್ತಮ ಫಲ ಸಿಕ್ಕಂತಾಗಿದೆ.

ಮಧ್ಯರಾತ್ರಿ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರವಾಗಿ ಪೊಲೀಸ್ ಇಲಾಖೆ ಮೃದು ಧೋರಣೆ ತೋರಿಸುತ್ತಿರುವ ಬಗ್ಗೆ ಸೀತಮ್ಮ ಎಂಬವರು ಪುತ್ತೂರು ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ದೌರ್ಜ್ಯನ್ಯ ಎಸಗಿದ ಆರೋಪ ಎದುರಿಸುತ್ತಿರುವ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಬೇಕೆಂದು ಆದೇಶ ಹೊರಡಿಸಿದೆ.

ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ:
ಪ್ರತಿಭಟನಾ ನಿರತ ಸ್ಥಳಕ್ಕೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭೇಟಿ ನೀಡಿ, ಉಪವಾಸ ಸತ್ಯಾಗ್ರಹದಲ್ಲಿ ತೊಡಗಿದ್ದ ಪುಟ್ಟ ಮಗು,ವೃದ್ಧರೊಂದಿಗೆ ಸಂತ್ರಸ್ಥ ಕುಟುಂಬ ಹಾಗೂ ನೀತಿ ತಂಡದ ರಾಜ್ಯಾಧ್ಯಕ್ಷ ಜಯಂತ್ ಟಿ ಯವರ ಅರೋಗ್ಯ ವಿಚಾರಿಸಿ, ಸೀಯಾಳ ನೀಡಿದರು. ಹಾಗೆಯೇ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ಸಿಗಬೇಕೆಂದು ಆಗ್ರಹಿಸಿದರು.

- Advertisement -
spot_img

Latest News

error: Content is protected !!