- Advertisement -
- Advertisement -
ಮಂಗಳೂರು: ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಂಕನಾಡಿ ಸಮೀಪದ ಅಡುಮರೋಳಿ ಎಂಬಲ್ಲಿ ಘಟನೆ ನಡೆದಿದ್ದು, ಪತಿ ಮಲ್ಲಿಕಾರ್ಜುನ್ ಮತ್ತು ಪತ್ನಿ ಸೌಮ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ಮಲ್ಲಿಕಾರ್ಜುನ್ ಹುಬ್ಬಳ್ಳಿ ಮೂಲದವರಾಗಿದ್ದು, ಸೌಮ್ಯ ಮಂಗಳೂರಿನವರಾಗಿದ್ದಾರೆ. ಮೃತ ದಂಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಕಂಕನಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -