Saturday, June 6, 2026
Homeಕರಾವಳಿಬಂಟ್ವಾಳ: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೇ ಪತಿ‌ ಸಾವು

ಬಂಟ್ವಾಳ: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆಗೆ ಯತ್ನ: ಚಿಕಿತ್ಸೆ ಫಲಿಸದೇ ಪತಿ‌ ಸಾವು

- Advertisement -
- Advertisement -

ಬಂಟ್ವಾಳ: ಪತಿ ಮತ್ತು ಪತ್ನಿ ಜೊತೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ  ಪತಿ‌ ಸಾವು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಬಾಕಿಲ ಎಂಬಲ್ಲಿ ನಡೆದಿದೆ ‌.

ಬಾಕಿಲ ನಿವಾಸಿಗಳಾದ ಪ್ರತಾಪ್‌ ಹಾಗೂ ವೀಣಾ ದಂಪತಿ‌ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ದಂಪತಿಗೆ ಐದು ವರ್ಷದ ಅವಳಿ ಜವಳಿ ಇಬ್ಬರು ಮಕ್ಕಳಿದ್ದಾರೆ‌.
ಎದುರು ಮನೆಯಲ್ಲಿದ್ದ ಮಕ್ಕಳು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ನೆರೆಮನೆಯವರಿಗೆ ತಿಳಿಸಿದ್ದಾರೆ ‌.

ಕೂಡಲೇ ಇವರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು,ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಪ್ರತಾಪ್‌ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆ ವೀಣಾ ಅವರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ ಎಂದು ತಿಳಿಸಿದ್ದಾರೆ.


ಸ್ಥಳಕ್ಕೆ ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಬೇಟಿ ನೀಡಿ ಘಟನೆಗೆ ಕಾರಣ ಏನು ಎಂಬುದರ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

- Advertisement -

Latest News

error: Content is protected !!