Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ; ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆತ್ಮಹ*ತ್ಯೆಗೆ ಶರಣು

ಬಂಟ್ವಾಳ; ಗರ್ಭಿಣಿ ಪತ್ನಿಯನ್ನು ಕೊಂದು ಪತಿ ಆತ್ಮಹ*ತ್ಯೆಗೆ ಶರಣು

- Advertisement -
- Advertisement -

ಬಂಟ್ವಾಳ; ಪತ್ನಿಯನ್ನು ಕೊಂದು ಪತಿ ಆತ್ಮಹ*ತ್ಯೆಗೆ ಶರಣಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ನಡೆದಿದೆ.

ತಿಮ್ಮಪ್ಪ ಮೂಲ್ಯ (52) ಅವರು ತಮ್ಮ  ಪತ್ನಿ ಜಯಂತಿ (45) ಅವರನ್ನು ಕೊಲೆ ಮಾಡಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ದರೆ ತಿಮ್ಮಪ್ಪ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜಯಂತಿ ಅವರು ಗರ್ಭಿಣಿಯಾಗಿದ್ದ, ಜುಲೈ 2 ರಂದು ಸೀಮಂತ ದಿನ ನಿಗದಿಯಾಗಿತ್ತು.

ಇನ್ನು ಈ ಬಗ್ಗೆ ಮೃತ ಜಯಂತಿರವರ ತಂಗಿ ಶ್ರೀಮತಿ ಸುಜಾತ (40) ಹಾಗೂ ಮೃತ ತಿಮ್ಮಪ್ಪರವರ ಅಣ್ಣ ಶ್ರೀ ವಿಶ್ವನಾಥ (55) ಅವರು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅದರಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!