Thursday, June 4, 2026
Homeಚಿಕ್ಕಮಗಳೂರುಚಿಕ್ಕಮಗಳೂರು; ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪತಿ

ಚಿಕ್ಕಮಗಳೂರು; ಪತ್ನಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದ ಪತಿ

- Advertisement -
- Advertisement -

ಚಿಕ್ಕಮಗಳೂರು; ಪತ್ನಿಯನ್ನು ಪತಿ ಸುತ್ತಿಗೆಯಿಂದ ಹೊಡೆದು ಕೊಲೆಗೈದ ಘಟನೆ ಘಟನೆ ಚಿಕ್ಕಮಗಳೂರು ನಗರದ ಕ್ರಿಶ್ಚಿಯನ್ ಕಾಲೋನಿಯಲ್ಲಿ ನಡೆದಿದೆ. ಶಮಾಭಾನು(34) ಕೊಲೆಯಾದ ಮಹಿಳೆ. ಶಬ್ಬರ್ ಅಹಮದ್ ಕೊಲೆಗೈದ ಪತಿ.

ದಂಪತಿ ಒಂದು ವಾರಗಳ ಕಾಲ ಗೋವಾಕ್ಕೆ ಪ್ರವಾಸ ಹೋಗಿದ್ದರು. ಅಲ್ಲಿಂದ ಮನೆಗೆ ಬಂದ ಮರುದಿನವೇ ಪತ್ನಿಯನ್ನು ಶಬ್ಬರ್ ಕೊಲೆಗೈದಿದ್ದಾನೆ. ಪತ್ನಿಯನ್ನ ಕೊಲೆಗೈದ ಪತಿ ಸೀದಾ ನಗರ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಮನೆಯ ರೂಮಿನ ಗೋಡೆಗಳೆಲ್ಲಾ ರಕ್ತಮಯವಾಗಿದೆ. ಆರೋಪಿ ಶಬ್ಬೀರ್ ಮೊದಲ ಪತ್ನಿ ಕೊರೋನಾದಿಂದ ಸಾವನ್ನಪ್ಪಿದ್ದರು. ಹಿರಿಯ ಪತ್ನಿ ಸಾವಿನ ನಂತರ ಕಳೆದೊಂದು ವರ್ಷದ ಹಿಂದೆ ಶಮಾಭಾನುರನ್ನ ಮದುವೆಯಾಗಿದ್ದನು. ಇದೀಗ, ಆಕೆಯನ್ನ ಸುತ್ತಿಗೆಯಿಂದ ಹೊಡೆದು ಕೊಲೆಗೈದು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಪೊಲೀಸರಿಗೆ ಶರಣಾಗಿರುವ ಆರೋಪಿ ಇಬ್ಬರಿಗೂ ಜಗಳವಾಯ್ತು, ಆಕೆ ನನ್ನನ್ನ ತಲೆದಿಂಬಿನಿಂದ ಮುಖಕ್ಕೆ ಮುಚ್ಚಿ ಸಾಯಿಸಲು ಯತ್ನಿಸಿದ್ದಳು. ಅದಕ್ಕೆ ಹೊಡೆದಿದ್ದೇನೆ ಎಂದು ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ನಗರ ಪೊಲೀಸರು ಹಾಗೂ ಎಸ್ಪಿ ವಿಕ್ರಮ್ ಅಮಟೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!