Wednesday, May 8, 2024
Homeಕರಾವಳಿಸುಳ್ಯ: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪಾಪಿ‌ ಪತಿ ಪರಾರಿ

ಸುಳ್ಯ: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪಾಪಿ‌ ಪತಿ ಪರಾರಿ

spot_img
- Advertisement -
- Advertisement -

ಸುಳ್ಯ: ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪಾಪಿ‌ ಪತಿ ಪರಾರಿಯಾಗಿರುವ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ಇಂತಹ ಪಾಪದ ಕೆಲಸ ಮಾಡಿದ ನೀಚ.

ಈತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.  ಈತ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್ ನವರಲ್ಲಿ ಹೇಳಿ ಊರಿಗೆ ತೆರಳಿದ್ದ.

ಇಂದು ಪಕ್ಕದ ರೂಂ ನವರಿಗೆ ಏಕೋ‌‌ ಆತನ‌ ಮೇಲೆ ಸಂಶಯ ಮೂಡಿದೆ. ಅವನು ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ. ಮೊನ್ನೆ ಮನೆಯಲ್ಲಿ ಕಿರುಚುವ ಶಬ್ದ ಕೇಳಿದೆ ಎಂದು ಅವರು ಸ್ನೇಹಿತರೊಬ್ಬರಿಗೆ ತಿಳಿಸಿದ್ದಾರೆ.

ಅವರು ಹೊಟೇಲ್ ಮಾಲೀಕರಿಗೆ ತಿಳಿಸಿ ಹೊಟೇಲ್ ಮಾಲೀಕರು ಪೋಲಿಸರಿಗೆ ವಿಷಯ ತಿಳಿಸಿ ಪೊಲೀಸರು ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಶಂಕಿತ ಅರೋಪಿ ಪರಾರಿಯಾಗಿದ್ದು, ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ. ಬೆರಳಚ್ಚು ತಜ್ಞರು ಮತ್ತು ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಬರಲಿದ್ದಾರೆಂದು ತಿಳಿದುಬಂದಿದೆ.

- Advertisement -
spot_img

Latest News

error: Content is protected !!