Friday, June 5, 2026
HomeUncategorizedವಿಟ್ಲ; ಗಂಡ ಹೆಂಡತಿ ಜಗಳ ಪತ್ನಿ ಸಾವಿನಲ್ಲಿ ಅಂತ್ಯ

ವಿಟ್ಲ; ಗಂಡ ಹೆಂಡತಿ ಜಗಳ ಪತ್ನಿ ಸಾವಿನಲ್ಲಿ ಅಂತ್ಯ

- Advertisement -
- Advertisement -

ವಿಟ್ಲ; ಗಂಡ ಹೆಂಡತಿ ಜಗಳ ಪತ್ನಿ ಸಾವಿನಲ್ಲಿ ಅಂತ್ಯವಾಗಿರುವ ಘಟನೆ . ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ದೇವಿನಗರ ನಿವಾಸಿ ಲೀಲಾ (45) ಮೃತ ಮಹಿಳೆ.

ಲೀಲಾ ಅವರ ಗಂಡ ಸಂಜೀವ ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದರು ಎನ್ನಲಾಗಿದೆ. ಅದೇ ರೀತಿ ಮೊನ್ನೆ ಕೂಡ ಗಲಾಟೆ ಮಾಡಿ ಹೆಂಡತಿಯನ್ನು ದೂಡಿ ಹಾಕಿದ್ದಾರೆ.  ಪರಿಣಾಮ ಗಂಭೀರ ಗಾಯಗೊಂಡಿದ್ದಾರೆ. ಮಾಹಿತಿ ತಿಳಿದ ಸ್ಥಳೀಯರು ಕೂಡಲೇ ಮಹಿಳೆಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ರವಾನಿಸಿದ್ದಾರೆ. ಇದೀಗ ಗುರುವಾರ ಮುಂಜಾನೆ ಲೀಲಾರವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತರು ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ವಿಟ್ಲ ಪೋಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

- Advertisement -

Latest News

error: Content is protected !!