ಕಾರ್ಕಳ: ಅಜೆಕಾರಿನ ದೆಪ್ಪುತ್ತೆಯ ಬಾಲಕೃಷ್ಣ ಪೂಜಾರಿ ಅವರನ್ನು ಪತ್ನಿ ಪ್ರತಿಮಾ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಅರ್ಜಿಯನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ನ್ಯಾಯಾಲಯದ ಕಾರ್ಕಳ ಸಂಚಾರಿ ಪೀಠದ ನ್ಯಾಯಾಧೀಶರು ತಿರಸ್ಕರಿಸಿದ್ದಾರೆ.
ಯಾಂಗ ಬಂಧನದಲ್ಲಿರುವ ಪ್ರತಿಮಾ ಸಲ್ಲಿಸಿರುವ ಜಾಮೀನು ಅರ್ಜಿಗೆ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಿದ್ದರು.ವಾದ- ಪ್ರತಿವಾದ ಆಲಿಸಿದ ನ್ಯಾಯಾಧೀಶ ಸಮಿವುಲ್ಲಾ ಅವರು, ಜಾಮೀನು ನೀಡಲು ನಿರಾಕರಿಸಿದ್ದಾರೆ.
ಇದಕ್ಕೂ ಮೊದಲು ಪ್ರಕರಣದ ಮತ್ತೋರ್ವ ಆರೋಪಿ ದಿಲೀಪ್ ಹೆಗ್ಡೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿಸ್ಕರಿಸಿತ್ತು.
ಪ್ರಕರಣದ ವಿವರ; ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆಯ ನಿವಾಸಿ ಬಾಲಕೃಷ್ಣ ಪೂಜಾರಿ ಅವರನ್ನು 2024ರ ಅ. 20 ರಂದು ಪತ್ನಿ ಪ್ರತಿಮಾ ಹಾಗೂ ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಕೊಲೆ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಪ್ರಕರಣ ಸಂಬಂಧ ಅ. 25 ರಂದು ಆರೋಪಿಗಳನ್ನು ಅಜೆಕಾರು ಪೊಲೀಸರು ಬಂಧಿಸಿದ್ದರು.