- Advertisement -
- Advertisement -
ಬೆಂಗಳೂರಿನ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಸುಮಾರು 1.07 ಕೋಟಿ ರೂಪಾಯಿ ಮೌಲ್ಯದ 3.05 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಲಾಗಿದೆ. ಥೈಲ್ಯಾಂಡ್‌ನ ಪುಕೆಟ್‌ನಿಂದ ಆಗಮಿಸಿದ್ದ ಪ್ರಯಾಣಿಕನೊಬ್ಬನ ನಡವಳಿಕೆ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಆತನ ಲಗೇಜ್ ಬ್ಯಾಗ್ ತಪಾಸಣೆ ನಡೆಸಿದಾಗ ಈ ಅಕ್ರಮ ಗಾಂಜಾ ಸಾಗಾಟ ಪತ್ತೆಯಾಗಿದೆ.
ಕಸ್ಟಮ್ಸ್ ಅಧಿಕಾರಿಗಳು ತಕ್ಷಣವೇ ಗಾಂಜಾವನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಎನ್‌ಡಿಪಿಎಸ್ (NDPS) ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಾಲದ ಕುರಿತು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
- Advertisement -


