Sunday, June 7, 2026
Homeತಾಜಾ ಸುದ್ದಿಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂಬ ಆಸೆ ನನಗೂ ಇದೆ: ಶ್ರೀರಾಮುಲು ಅಚ್ಚರಿಯ ಹೇಳಿಕೆ

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂಬ ಆಸೆ ನನಗೂ ಇದೆ: ಶ್ರೀರಾಮುಲು ಅಚ್ಚರಿಯ ಹೇಳಿಕೆ

- Advertisement -
- Advertisement -

ಬಳ್ಳಾರಿ: ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ. ಹಿಂದುಳಿದ ಸಮುದಾಯ ಎಂಬುದು ಬಂದಾಗ ನಾನು ಮತ್ತು ಸಿದ್ದರಾಮಯ್ಯ ಒಂದೇ ಎಂದು ಸಚಿವ ಬಿ. ಶ್ರೀರಾಮುಲು ಅವರು ಪ್ರತಿಪಕ್ಷ ನಾಯಕನನ್ನು ಹಾಡಿ ಹೊಗಳಿದ್ದಾರೆ.

ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋ ಆಸೆ ನನಗೂ ಇದೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದರು.

ಹಿಂದುಳಿದ ಸಮುದಾಯಗಳು ಒಂದಾದರೆ ರಾಜ್ಯ ಮತ್ತು ದೇಶದಲ್ಲಿ ಕ್ರಾಂತಿ ಮಾಡಬಹುದು. ನಮ್ಮಲ್ಲಿ ಒಗ್ಗಟ್ಟು ಪ್ರದರ್ಶನ ಆಗಬೇಕು. ಎಂದು ಶ್ರೀರಾಮುಲು ಹೇಳಿದ್ದಾರೆ.

- Advertisement -

Latest News

error: Content is protected !!