Thursday, June 4, 2026
Homeತಾಜಾ ಸುದ್ದಿನಾನು RSS, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ; ಸಿಎಂ ಸಿದ್ದರಾಮಯ್ಯ ಹೇಳಿಕೆ

ನಾನು RSS, ಜಾತಿ ವ್ಯವಸ್ಥೆ ಮತ್ತು ಮೌಢ್ಯಕ್ಕೆ ವಿರುದ್ಧ; ಸಿಎಂ ಸಿದ್ದರಾಮಯ್ಯ ಹೇಳಿಕೆ

- Advertisement -
- Advertisement -

ನಾನು ಮೊದಲಿಂದಲೂ ಸನಾತನವಾದಿ RSSಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ RSS ನದ್ದು. ಈ ಸಿದ್ಧಾಂತ ಶ್ರಮಿಕ ಜಾತಿ, ವರ್ಗಗಳ ವಿರೋಧಿ. ಅದಕ್ಕೇ ನಾನು RSS ಅನ್ನು ಮೊದಲಿನಿಂದಲೂ ವಿರೋಧಿಸುತ್ತೇನೆ. ಇದೇ ಕಾರಣಕ್ಕೆ ಕಾಗಿನೆಲೆ ಪೀಠ ಎಲ್ಲಾ ಶೋಷಿತ ಸಮುದಾಯಗಳ ಪೀಠ ಆಗಬೇಕು ಎನ್ನುವುದನ್ನು ಪ್ರತಿಪಾದಿಸಿದ್ದೆ. ಇನ್ನು ನಾನು ರಾಜಕಾರಣಕ್ಕೆ ಬರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ, ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯ ಆಗುತ್ತಿರಲಿಲ್ಲ ಎಂದು ಇತಿಹಾಸದ ಘಟನೆಗಳನ್ನು ಒಂದೊಂದಾಗಿ ವಿವರಿಸಿದರು.

ನಾನು ಕೇವಲ ಕುರುಬ ಸಮಾಜಕ್ಕೆ ಮಾತ್ರ ಇಷ್ಟು ಮಾಡಲಿಲ್ಲ. ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಸೇರಿ ಎಲ್ಲಾ ಶೋಷಿತ ಸಮುದಾಯಗಳ ಏಳಿಗೆಗೂ ನಾನು ಕೆಲಸ ಮಾಡಿದ್ದೇನೆ.

- Advertisement -

Latest News

error: Content is protected !!