Saturday, April 27, 2024
Homeತಾಜಾ ಸುದ್ದಿನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಕೆ.ಎಸ್​.ಈಶ್ವರಪ್ಪ

ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ: ಕೆ.ಎಸ್​.ಈಶ್ವರಪ್ಪ

spot_img
- Advertisement -
- Advertisement -

ಹಾಸನ: ಸಿಎಂ ಬೊಮ್ಮಾಯಿ ಅವರು,ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿಕೆ ನೀಡಿದ ಬೆನ್ನಲ್ಲೇ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಪ್ರತಿಕ್ರಯಿಸಿದ್ದು, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ.

ಹಾಸನದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ, ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಸಿಎಂ ಬೊಮ್ಮಾಯಿಗೆ ಗೊತ್ತು. ಕೇಂದ್ರ ನಾಯಕರ ಜೊತೆ ಸಿಎಂ ಬೊಮ್ಮಾಯಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಕೇಂದ್ರ ನಾಯಕರು, ಸಿಎಂ ಬೊಮ್ಮಾಯಿ ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ ಹೇಳಿದರು. 

- Advertisement -
spot_img

Latest News

error: Content is protected !!