Thursday, June 25, 2026
Homeಇತರನಾನು ಆರೋಗ್ಯವಾಗಿದ್ದೇನೆಂದ ಮಂಡ್ಯದ ಕಾಮೇಗೌಡರು

ನಾನು ಆರೋಗ್ಯವಾಗಿದ್ದೇನೆಂದ ಮಂಡ್ಯದ ಕಾಮೇಗೌಡರು

- Advertisement -
- Advertisement -

ಮಂಡ್ಯ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ನಿನ್ನೆ ಹೇಳಲಾಗಿತ್ತು. ಆದ್ರೆ  ಇದೀಗ ಸ್ವತಃ ಕಾಮೇಗೌಡರೇ  ನಾನು ಆರೋಗ್ಯವಾಗಿದ್ದೇನೆ, ಆತಂಕ ಪಡುವುದು ಬೇಡ ಎಂದು ತಿಳಿಸಿದ್ದಾರೆ.

ಕಾಮೇಗೌಡರಿಗೆ ನಾಲ್ಕು ದಿನಗಳ ಹಿಂದಷ್ಟೇ ಕೊರೊನಾ ಸೋಂಕು ದೃಢಪಟ್ಟಿದ್ದು, ಮಂಡ್ಯದ ಕೋವಿಡ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರು ಆರೋಗ್ಯವಾಗಿದ್ದಾರೆ.

‘ಆಸ್ಪತ್ರೆಯಲ್ಲಿ ನನ್ನನ್ನು ಚೆನ್ನಾಗಿ ನೋಡ್ಕೋತ್ತಿದ್ದಾರೆ. ಟೈಂ ಟೈಂಗೆ ವೈದ್ಯರು ಬಂದು ತಪಾಸಣೆ ನಡೆಸ್ತಿದ್ದಾರೆ. ಊಟ ತಿಂಡಿಯ ವ್ಯವಸ್ಥೆಯೂ ಚೆನ್ನಾಗಿದೆ. ನನಗೆ ಸ್ವಲ್ಪ ಕಾಲು ನೋವು ಇರೋದು ಬಿಟ್ರೆ ಬೇರೆ ಯಾವುದೇ ರೀತಿಯ ಸಮಸ್ಯೆ ಇಲ್ಲ. ನಾನು ಆರೋಗ್ಯವಾಗಿದ್ದು, ಯಾರೂ ಆತಂಕ ಪಡಬೇಡಿ ಎಂದು ಕಾಮೇಗೌಡರು ತಿಳಿಸಿದ್ದಾರೆ.

ಅಂದ್ಹಾಗೆ, ನಿನ್ನೆ ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್​,’ಕಾಮೇಗೌಡರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿರುವುದು ನನ್ನ ಗಮನಕ್ಕೆ ಬಂದ ಕೂಡಲೇ ಮಂಡ್ಯ ವೈದ್ಯಕೀಯ ಕಾಲೇಜಿನ ನಿರ್ದೇಶಕರಿಗೆ ಕರೆ ಮಾಡಿ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡು ಚಿಕಿತ್ಸೆ ಒದಗಿಸಬೇಕೆಂದು ಸೂಚನೆ ನೀಡಿದ್ದೇನೆ. ಕಾಮೇಗೌಡರು ಶೀಘ್ರ ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ’ ಎಂದು ನಿನ್ನೆ ಟ್ವೀಟ್‌ ಮಾಡಿದ್ದರು. ಅಲ್ಲದೇ ಮಾಜಿ ಸಿಎಂ ಕುಮಾರಸ್ವಾಮಿ ಅವರು ಕೂಡ ಕಾಮೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡಬೇಕೆಂದು ನಿನ್ನೆ ಸರ್ಕಾರಕ್ಕೆ ಟ್ವೀಟ್ ಮೂಲಕ ಒತ್ತಾಯಿಸಿದ್ದರು.

- Advertisement -

Latest News

error: Content is protected !!