Wednesday, May 8, 2024
Homeತಾಜಾ ಸುದ್ದಿಒಬ್ಬ ರಾಜಕಾರಣಿಯಾಗಿ ನಾನು ಫೇಲ್, ಸಂಸದನಾಗಿ ಸಕ್ಸಸ್: ಪ್ರತಾಪ ಸಿಂಹ

ಒಬ್ಬ ರಾಜಕಾರಣಿಯಾಗಿ ನಾನು ಫೇಲ್, ಸಂಸದನಾಗಿ ಸಕ್ಸಸ್: ಪ್ರತಾಪ ಸಿಂಹ

spot_img
- Advertisement -
- Advertisement -

ಬೆಂಗಳೂರು: ಖಾಸಗಿ ಸುದ್ದಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಸಂಸದ ಪ್ರತಾಪ ಸಿಂಹ, ‘ಒಬ್ಬ ರಾಜಕಾರಣಿಯಾಗಿ ನಾನು ಫೇಲ್ ಆಗಿದ್ದೇನೆ. ಆದರೆ, ಒಬ್ಬ ಸಂಸದನಾಗಿ ಸಕ್ಸಸ್ ಆಗಿದ್ದೇನೆ,’ ಎಂದು ಹೇಳಿದರು. 

‘ರಾಜಕಾರಣಕ್ಕೂ ಅಭಿವೃದ್ಧಿ ಬಹಳ ವ್ಯತ್ಯಾಸವಿದೆ.  ಒಬ್ಬ ರಾಜಕಾರಣಿಯಾಗಿ ನಾನು ಫೇಲ್ ಆಗಿದ್ದೇನೆ. ಆದರೆ, ಒಬ್ಬ ಸಂಸದನಾಗಿ ಸಕ್ಸಸ್ ಆಗಿದ್ದೇನೆ. ರಾಜಕಾರಣಿಯಾದವರು ಕೇವಲ ಚುನಾವಣಾ ಟಿಕೆಟ್‌ಗೋಸ್ಕರ ಹೋರಾಟ ಮಾಡಬಾರದು. ಒಳ್ಳೆಯ ಕೆಲಸ ಮಾಡುವುದಕ್ಕಾಗಿ ಹೋರಾಡಬೇಕು,’ ಎಂದರು.

‘ನಾನು ಚುನಾವಣೆಯಲ್ಲಿ ಕೇವಲ ಕೆಲಸದ ಬಲದಿಂದಲೇ ಜನರ ಪ್ರೀತಿ, ವಿಶ್ವಾಸ ಗಳಿಸಿದೆ. ಅದೇ ರೀತಿ ನಾಗಾಲೋಟದಿಂದ ಓಡಾಡಿ, ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಇದೇ ಕಾರಣಕ್ಕೆ ಜನರು ಎರಡು ಬಾರಿ ಸಂಸದನನ್ನಾಗಿ ಆಯ್ಕೆ ಮಾಡಿದ್ದರು. ಆದರೆ, ಇವುಗಳ ಮಧ್ಯೆ ರಾಜಕಾರಣ ಇರುತ್ತದೆ ಎಂಬುದು ಅರಿತುಕೊಳ್ಳುವಲ್ಲಿ ನಾನು ಸೋತಿದ್ದೇನೆ. ನಾನು ಇದುವರೆಗೆ ರಾಜಕಾರಣ ಕಲಿತಿರಲಿಲ್ಲ. ಆದರೆ, ಇನ್ನು ಮುಂದೆ ಖಂಡಿತಾ ರಾಜಕಾರಣ ಕಲಿಯುತ್ತೇನೆ,’ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

- Advertisement -
spot_img

Latest News

error: Content is protected !!