Saturday, June 6, 2026
Homeತಾಜಾ ಸುದ್ದಿಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ: ಆದರೆ ಅದನ್ನು ವೈಭವೀಕರಿಸಿದ ರೀತಿ ಸರಿಯಿಲ್ಲ:...

ಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ: ಆದರೆ ಅದನ್ನು ವೈಭವೀಕರಿಸಿದ ರೀತಿ ಸರಿಯಿಲ್ಲ: ಡಿಕೆಶಿ

- Advertisement -
- Advertisement -

ಬೆಂಗಳೂರು: ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣವನ್ನು ನಾನು ಸಮರ್ಥಿಸಿಕೊಂಡಿಲ್ಲ. ಅದೊಂದು ಇನ್ಸಿಡೆಂಟ್ ಆಗಿದೆ, ಅದಕ್ಕೆ ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು. ಆದರೆ ಅದನ್ನು ವೈಭವೀಕರಿಸಿದ ರೀತಿ ಸರಿಯಿಲ್ಲ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪವನ್ನು ಡೈವರ್ಟ್​ ಮಾಡಲು ರಾಜ್ಯ ಬಿಜೆಪಿ ಸರ್ಕಾರ ಮಂಗಳೂರಿನಲ್ಲಿ ಕುಕ್ಕರ್​ ಬಾಂಬ್​ ಬ್ಲಾಸ್ಟ್​ ಮಾಡಿಸಿದೆ ಎಂದು ಗಂಭೀರ ಆರೋಪ ಮಾಡಿದರು. ಮತ ಮಾಹಿತಿ ಕಳವು ಅಕ್ರಮ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ಕುಕ್ಕರ್ ಬಾಂಬ್ ಬ್ಲಾಸ್ಟ್ ವಿಚಾರ ತಂದರು. ಎಲ್ಲಿಂದ ಭಯೋತ್ಪಾದಕರು ಬಂದು ಬ್ಲಾಸ್ಟ್ ಮಾಡಿದರು? ಡಿಜಿ ಆತುರದಲ್ಲಿ ಭಯೋತ್ಪಾದಕ ಕೃತ್ಯ ಎಂದರು. ಕೇವಲ ವಿಚಾರ ಬೇರೆಡೆ ಸೆಳೆಯುವ ಪ್ರಯತ್ನವಾಗಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

- Advertisement -

Latest News

error: Content is protected !!