Wednesday, June 3, 2026
Homeತಾಜಾ ಸುದ್ದಿಮೈಸೂರು: ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ: ಪ್ರತಾಪ್‌ ಸಿಂಹ

ಮೈಸೂರು: ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ: ಪ್ರತಾಪ್‌ ಸಿಂಹ

- Advertisement -
- Advertisement -

ಮೈಸೂರು: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ಬೆನ್ನಲ್ಲೇ ವಿರೋಧ ಪಕ್ಷ ನಾಯಕರಿಂದ ವ್ಯಕ್ತವಾಗುತ್ತಿದ್ದ ಟೀಕೆಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಖಡಕ್ ಉತ್ತರ ನೀಡಿದ್ದಾರೆ. ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್‌ ಸಿಂಹ, ಟಿಪ್ಪುಗೂ ಮೈಸೂರಿಗೂ ಏನು ಸಂಬಂಧ? ಟಿಪ್ಪು ಏನು ಮೈಸೂರಿನವನಾ? ಅವನು ಶ್ರೀರಂಗಪಟ್ಟಣದವನು. ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಟಿಪ್ಪು ಕೊಡುಗೆ ಏನಿದೆ ಎಂದು ಪ್ರಶ್ನಿಸಿದ್ದಾರೆ.

- Advertisement -

Latest News

error: Content is protected !!