Saturday, August 29, 2026
Homeತಾಜಾ ಸುದ್ದಿʻಕಾಂತಾರʼ ಸಿನಿಮಾ ನೋಡಿ ಮೂಕವಿಸ್ಮಿತನಾದೆ : ರಿಷಭ್‌ ನಟನೆಗೆ ಕಿಚ್ಚನ ಮೆಚ್ಚುಗೆ

ʻಕಾಂತಾರʼ ಸಿನಿಮಾ ನೋಡಿ ಮೂಕವಿಸ್ಮಿತನಾದೆ : ರಿಷಭ್‌ ನಟನೆಗೆ ಕಿಚ್ಚನ ಮೆಚ್ಚುಗೆ

- Advertisement -
- Advertisement -

ಕಾಂತಾರ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ರಿಷಬ್ ಶೆಟ್ಟಿ ನಟನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪರಭಾಷಿಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿರುವ ಈ ಸಿನಿಮಾವನ್ನ ನೋಡಿ ಇದೀಗ ಕಿಚ್ಚ ಸುದೀಪ್ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.. 

ನಾನು ಫೆಂಟಾಸ್ಟಿಕ್ ಎನಿಸುವ ಸಿನಿಮಾಗಳನ್ನು ನೋಡುತ್ತೇನೆ. ಆದರೆ ಅಪರೂಪಕ್ಕೆ ನಮ್ಮನ್ನು ಮಂತ್ರಮುಗ್ಧಗೊಳಿಸುವ ಸಿನಿಮಾ ನೋಡುತ್ತೇವೆ. ಕಾಂತಾರ ಸಿನಿಮಾ ನನ್ನನ್ನು ಮೂಕವಿಸ್ಮಿತನನ್ನಾಗಿಸಿದೆ. ರಿಷಬ್ ಫ್ಯಾಬುಲಸ್ ಆಗಿ ನಟಿಸಿದ್ದು ಸಂಪೂರ್ಣ ಶ್ರಮ ಹಾಕಿದ್ದಾರೆ. ಸುಮ್ಮನೆ ಆರಾಮವಾಗಿ ಕುಳಿತು ಅಚ್ಚರಿಪಟ್ಟು ವ್ಯಕ್ತಿಯೊಬ್ಬರು ಈ ರೀತಿಯಾಗಿ ಏನಾದರೂ ಹೇಗೆ ಯೋಚಿಸಲು ಸಾಧ್ಯ ಎಂದು ಆಲೋಚಿಸುವುದಷ್ಟೇ ನಿಮ್ಮ ಕೆಲಸ ಎಂದಿದ್ದಾರೆ.

ಹಾಗೇ ಇಂಥದ್ದೊಂದು ಅಸಾಧಾರಣ ಚಿತ್ರವನ್ನು ಕಟ್ಟಿಕೊಟ್ಟಿದ್ದಕ್ಕೆ ರಿಷಬ್ ಶೆಟ್ಟಿಗೆ ನನ್ನ ಮೊದಲ ಮೆಚ್ಚುಗೆ. ಅವರ ಮೇಲೆ ನಂಬಿಕೆ ಇಟ್ಟು, ಇಂಥದ್ದೊಂದು ಚಿತ್ರವನ್ನು ರೂಪಿಸುವುದಕ್ಕೆ ಕಾರಣರಾದ ಚಿತ್ರತಂಡದವರೆಲ್ಲರಿಗೂ ನನ್ನ ನಮನ. ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ನಿಜಕ್ಕೂ ಒಬ್ಬ ಅಪ್ರತಿಮ ಸಂಗೀತ ನಿರ್ದೇಶಕ ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಈ ಚಿತ್ರದ ಮೇಲೆ ನಂಬಿಕೆ ಇಟ್ಟು, ಇದನ್ನು ನಿರ್ಮಿಸಿದ ಹೊಂಬಾಳೆ ಫಿಲ್ಮ್ಸ್​ ಸಂಸ್ಥೆಗೂ ನನ್ನ ಕೃತಜ್ಞತೆಗಳು. ಚಿತ್ರ ನೋಡಿದವರು ನೀಡಿದ ಪ್ರತಿಕ್ರಿಯೆಗೆ ತಕ್ಕ ಹಾಗೆ ಚಿತ್ರ ಮೂಡಿಬಂದಿದೆಯಾ ಎಂಬ ಕುತೂಹಲದಿಂದ ಚಿತ್ರ ನೋಡಿದೆ. ಚಿತ್ರ ಚೆನ್ನಾಗಿ ಮೂಡಿಬಂದಿರುವುದಷ್ಟೇ ಅಲ್ಲ, ನಮ್ಮ ನಿರೀಕ್ಷೆಗಳನ್ನೂ ಮೀರಿ ಅದ್ಭುತವಾಗಿದೆ’ ಎಂದು ಸುದೀಪ್ ಬರೆದುಕೊಂಡಿದ್ದಾರೆ.

- Advertisement -

Latest News

error: Content is protected !!