Tuesday, June 23, 2026
Homeತಾಜಾ ಸುದ್ದಿಹೈಕಮಾಂಡ್ ನನ್ನನ್ನು ಕೇಳಿದರೆ ನನಗೇನು ಬೇಕೋ ಹೇಳುತ್ತೇನೆ; ನವದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

ಹೈಕಮಾಂಡ್ ನನ್ನನ್ನು ಕೇಳಿದರೆ ನನಗೇನು ಬೇಕೋ ಹೇಳುತ್ತೇನೆ; ನವದೆಹಲಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

- Advertisement -
- Advertisement -

ನವದೆಹಲಿ: ಸಚಿವ ಸಂಪುಟ ವಿಸ್ತರಣೆ, ನಾಯಕತ್ವ ಬದಲಾವಣೆ ಬಗ್ಗೆ ಮುಖ್ಯಮಂತ್ರಿಗಳ ಬಳಿ ಮಾತನಾಡಿ, ನನಗೆ ಏನೂ ತಿಳಿದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ನವದೆಹಲಿಯಲ್ಲಿ ಶನಿವಾರ ರಾತ್ರಿ ಹೇಳಿಕೆ ನೀಡಿರುವ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿಯವರು ಯಾರನ್ನು ಭೇಟಿ ಮಾಡಿದ್ದಾರೋ, ಏನನ್ನು ಮಾತನಾಡಿದ್ದಾರೋ ನನಗೆ ತಿಳಿದಿಲ್ಲ, ಹೈಕಮಾಂಡ್ ನನ್ನನ್ನು ಏನಾದರೂ ಕೇಳಿದರೆ ನನಗೇನೂ ಬೇಕೋ ಅದನ್ನು ಹೇಳುತ್ತೇನೆ ಎಂದಿದ್ದಾರೆ.

ಪಕ್ಷ‌ ಹೇಗೆ ಹೇಳುತ್ತದೆಯೋ ಆ ರೀತಿ ಕೇಳಿಕೊಂಡು ನಾವೆಲ್ಲಾ ಹೋಗಬೇಕು, ಅಷ್ಟೇ ನಮ್ಮ ಕೆಲಸ, ಹೈಕಮಾಂಡ್ ನವರು ನನ್ನನ್ನು ಏನು ಕೇಳುತ್ತಾರೆ, ಏನನ್ನು ಕೇಳುವುದಿಲ್ಲ ಎಂದು ನನಗೆ ಗೊತ್ತಿದೆ ಎಂದೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದೇ ವೇಳೆ, ಹೈಕಮಾಂಡ್ ಭೇಟಿ ಯಾವಾಗ ಎನ್ನುವುದರ ಬಗ್ಗೆ ತಿಳಿದಿಲ್ಲ. ಭಾನುವಾರ ಭೇಟಿಯಾಗಬಹುದು ಎಂದೂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

- Advertisement -

Latest News

error: Content is protected !!