Monday, June 8, 2026
Homeಕರಾವಳಿಎತ್ತಿನಹೊಳೆ ಯೋಜನೆ ಆದರೆ ನೇಣು ಹಾಕಿಕೊಳ್ಳುತ್ತೇನೆ! : ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಭೋಜೇಗೌಡ...

ಎತ್ತಿನಹೊಳೆ ಯೋಜನೆ ಆದರೆ ನೇಣು ಹಾಕಿಕೊಳ್ಳುತ್ತೇನೆ! : ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಭೋಜೇಗೌಡ ಸವಾಲು

- Advertisement -
- Advertisement -

ಬೆಂಗಳೂರು: ಎತ್ತಿನಹೊಳೆ ಯೋಜನೆ ಆದರೆ ನಾನು ನೇಣು ಹಾಕಿಕೊಳ್ಳುತ್ತೇನೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಭೋಜೇಗೌಡ ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಎತ್ತಿನಹೊಳೆ ಯೋಜನೆ ಕಾಮಗಾರಿ ವಿಳಂಬದ ಕುರಿತು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಪ್ರಸ್ತಾಪದ ವೇಳೆ ಮಾತನಾಡಿದ ಭೋಜೇಗೌಡ, 22 ಸಾವಿರ ಕೋಟಿ ರೂಪಾಯಿ ಖರ್ಚಾದರೂ ಈ ಯೋಜನೆ ಮುಗಿಸಲು ಸಾಧ್ಯವಿಲ್ಲ, 50 ಸಾವಿರ ಕೋಟಿ ರೂಪಾಯಿ ಖರ್ಚು ಮಾಡಿದರೂ ಚಿಕ್ಕಬಳ್ಳಾಪುರಕ್ಕೆ ನೀರು ಕೊಡಲು ಸಾಧ್ಯವಿಲ್ಲ,
ಇದು ನನ್ನ ಚಾಲೆಂಜ್ ಎಂದು ಸದನದಲ್ಲಿ ಸವಾಲು ಹಾಕಿದ್ದಾರೆ.

ಬಯಲು ಸೀಮೆಯ ಏಳು ಜಿಲ್ಲೆಗಳಿಗೆ ನೇತ್ರಾವತಿ ನದಿ ತಿರುವುಗೊಳಿಸಿ ಕುಡಿಯುವ ನೀರಿನ ಎತ್ತಿನ ಹೊಳೆ ಯೋಜನೆ ಸ್ಥಗಿತ ಆಗಿರುವ ಬಗ್ಗೆ ರಾಜೇಂದ್ರ ರಾಜಣ್ಣ ಪ್ರಸ್ತಾಪ ಮಾಡಿದಾಗ ಉತ್ತರಿಸಿದ ಜಲ ಸಂಪನ್ಮೂಲ ಸಚಿವ ಗೋವಿಂದ
ಕಾರಜೋಳ, ಶೇ‌ಕಡಾ ೭೦ ರಷ್ಟು ಕಾಮಗಾರಿ ಪೂರ್ಣವಾಗಿದೆ, ಕೊರಟಗೆರೆ ಮತ್ತು ದೊಡ್ಡಬಳ್ಳಾಪುರ ಎರಡು ತಾಲೂಕು ನಡುವಿನ ಭೂಮಿಯ ಬೆಲೆ ಬಗ್ಗೆ ವ್ಯತ್ಯಾಸ ಇದೆ, ಇದರಿಂದ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!