Wednesday, June 24, 2026
Homeತಾಜಾ ಸುದ್ದಿಹೈಕಮಾಂಡ್ ಹೇಳಿದರೆ ಇನ್ನೂ ಎರಡು ಬಜೆಟ್ ನಾನೇ ಮಂಡಿಸುತ್ತೇನೆ; ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಹೇಳಿಕೆ

ಹೈಕಮಾಂಡ್ ಹೇಳಿದರೆ ಇನ್ನೂ ಎರಡು ಬಜೆಟ್ ನಾನೇ ಮಂಡಿಸುತ್ತೇನೆ; ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಹೇಳಿಕೆ

- Advertisement -
- Advertisement -

ಬೆಂಗಳೂರು: ಹೈಕಮಾಂಡ್ ಹೇಳಿದರೆ ಇನ್ನೂ ಎರಡು ಬಜೆಟ್ ನಾನೇ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ‌ವಿಧಾನಸಭೆಯಲ್ಲಿ ಇಂದು ಬಜೆಟ್ ಮೇಲೆ ನಡೆದಿದ್ದ ಚರ್ಚೆಗೆ ರಾಜ್ಯ ಸರ್ಕಾರದ ಉತ್ತರ ನೀಡುವ ವೇಳೆ ಸಿದ್ದರಾಮಯ್ಯ ಈ ಮಾತು ಹೇಳಿದ್ದಾರೆ.

ಇನ್ನೂ ಎರಡು ಬಜೆಟ್ ಅನ್ನು ನಮ್ಮ ಸರ್ಕಾರ ಮಂಡಿಸಿಯೇ ಮಂಡಿಸುತ್ತದೆ, 2028;ರವರೆಗೆ ನಾವೇ ಅಧಿಕಾರದಲ್ಲಿ ಇರುತ್ತೇವೆ ಮತ್ತು 2028ಕ್ಕೂ‌ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ವೇಳೆ ಎರಡು ಬಜೆಟ್ ಅಂತಾ ಹೇಳಿ ಎಂದು ವಿಪಕ್ ನಾಯಕ ಆರ್. ಅಶೋಕ್ ಕಾಲೆಳೆದಾಗ ಹೈಕಮಾಂಡ್ ಹೇಳಿದ್ರೆ ನಾನೇ ಬಜೆಟ್ ಮಂಡಿಸುತ್ತೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ.

ಇದೇ ವೇಳೆ ನೀನು ಮುಖ್ಯಮಂತ್ರಿ ಆಗುತ್ತೇನೆ ಅಂತಾ ಹೇಳಪ್ಪ ನೋಡೋಣ ಎಂದೂ ವಿಪಕ್ಷ ನಾಯಕ ಅಶೋಕ್ ಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.

- Advertisement -

Latest News

error: Content is protected !!